ದೆಹಲಿಯಲ್ಲಿ ಒಂದೇ ಕುಟುಂಬದ 11 ಮಂದಿಯ ನಿಗೂಢ ಸಾವು
ಸುದ್ದಿ ಸಾಗರ

ದೆಹಲಿಯಲ್ಲಿ ಒಂದೇ ಕುಟುಂಬದ 11 ಮಂದಿಯ ನಿಗೂಢ ಸಾವು

ಉತ್ತರ ದೆಹಲಿಯ ಸಂತ್‌ ನಗರದಲ್ಲಿ ಘಟನೆ ನಡೆದಿದೆ. 75 ವರ್ಷದ ವೃದ್ಧೆ ಸೇರಿದಂತೆ ಒಟ್ಟು 11 ಮಂದಿಯ ಶವಗಳು ಮನೆಯೊಳಗಿನ ಕಬ್ಬಿಣದ ಸರಳಿಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ಕುಟುಂಬದ 11 ಮಂದಿಯ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿವೆ.

ಕಣ್ಣು, ಕೈಕಾಲಿಗೆ ಬಟ್ಟೆ ಕಟ್ಟಿ, ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಒಂದೇ ಕುಟುಂಬದ ಇವರೆಲ್ಲರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಉತ್ತರ ದೆಹಲಿಯ ಸಂತ್‌ ನಗರದಲ್ಲಿ ಈ ಘಟನೆ ನಡೆದಿದೆ. 75 ವರ್ಷದ ವೃದ್ಧೆ ಸೇರಿದಂತೆ ಒಟ್ಟು 11 ಮಂದಿಯ ಶವಗಳು ಮನೆಯೊಳಗಿನ ಕಬ್ಬಿಣದ ಸರಳಿಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಹಣಕಾಸಿನ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಆದರೆ, ಈಗಲೇ ಈ ಘಟನೆಯ ಬಗ್ಗೆ ಒಂದು ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮನೆಯಲ್ಲಿ ಯಾವುದೇ ಡೆಟ್‌ನೋಟ್‌ ಸಿಕ್ಕಿಲ್ಲ. ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಒಂದು ವೇಳೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಈ ಆತ್ಮಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದ ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.