ಮೃತ ರೈತ ಆನಂದ್ ಕುಟುಂಬಕ್ಕೆ ಪರಿಹಾರ ಘೋಷಣೆ
ಸುದ್ದಿ ಸಾರ

ಮೃತ ರೈತ ಆನಂದ್ ಕುಟುಂಬಕ್ಕೆ ಪರಿಹಾರ ಘೋಷಣೆ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಪಟ್ಟು, ಶುಕ್ರವಾರ ಮೃತಪಟ್ಟ ರೈತ ಆನಂದ ಕುಮಾರ್ ಕುಟುಂಬಕ್ಕೆ ಸರಕಾರ 5 ಲಕ್ಷ ಪರಿಹಾರ ಘೋಷಿಸಿದೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ರೋಷನ್ ಬೇಗ್, ''ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಜತೆಗೆ ಎರಡು ಎಕರೆ ಜಮೀನು ನೀಡಲು ತೀರ್ಮಾನಿಸಲಾಗಿದೆ. ಇದನ್ನು ರಾಜಕೀಯಗೊಳಿಸುವುದು ಬೇಡ,'' ಎಂದಿದ್ದಾರೆ.

ಏ. 20ರಂದು ಚಿಕ್ಕಬಳ್ಳಾಪುರ ಕಚೇರಿ ಮುಂಭಾಗ ರೈತ ಆನಂದ ಕುಮಾರ್ ವಿಷ ಸೇವಿದ್ದರು. ಸರಕಾರಿ ಜಮೀನು ಮಂಜೂರಾತಿಗಾಗಿ ಅವರು ಆಗ್ರಹಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರ ಮೃತ ದೇಹವನ್ನು ಇಂದು ಸ್ವಗ್ರಾಮಕ್ಕೆ ಕಳುಹಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಾದ್ಯಂತ ಪೊಲೀಸ್ ಭದ್ರತೆ ಆಯೋಜಿಸಲಾಗಿದೆ. ಜೆಡಿಎಸ್ ಕಾರ್ಯಕರ್ತರು ಮೃತ ರೈತರ ಗ್ರಾಮ ಅಂಗರೇಕನಹಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, "ಚಿಕ್ಕ ಪುಟ್ಟ ವಿಚಾರಗಳಿಗೆಲ್ಲಾ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು,'' ಎಂದು ಕಿವಿ ಮಾತು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಮೃತ ರೈತ ಕುಟುಂಬಕ್ಕೆ ನೆರವು ನೀಡಿವುದಾಗಿ ತಿಳಿಸಿದ್ದಾರೆ.