ಎರಡನೇ ದಿನವೂ ನಡೆಯದ ಅಧಿವೇಶನ; ಉತ್ತರಖಾಂಡ್ ವಿಚಾರ ಚರ್ಚೆಗೆ ಆಗ್ರಹ
ಸುದ್ದಿ ಸಾರ

ಎರಡನೇ ದಿನವೂ ನಡೆಯದ ಅಧಿವೇಶನ; ಉತ್ತರಖಾಂಡ್ ವಿಚಾರ ಚರ್ಚೆಗೆ ಆಗ್ರಹ

ಉತ್ತರಾಖಾಂಡ್ ರಾಜಕೀಯ ಬಿಕ್ಕಟ್ಟಿನ ಮೇಲೆ ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗಿದ್ದರಿಂದ ಸಂಸತ್ತಿನ ಉಭಯ ಸದನದ ಕಲಾಪ ಬುಧವಾರಕ್ಕೆ ಮುಂದೂಡಲಾಯಿತು.

ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರು ಎರಡನೇ ದಿನವೂ ಕೋಲಾಹಲ ಸೃಷ್ಟಿಸಿದ್ದರಿಂದ ಕಲಾಪ ನಡೆಸಲು ಸಾಧ್ಯವಾಗದೆ ಉಭಯ ಸದನಗಳನ್ನು ಮುಂದುಡುವುದು ಅನಿವಾರ್ಯವಾಯಿತು.

ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರು ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಕೇಂದ್ರ ಸರ್ಕಾರವು ವಿರೋಧ ಪಕ್ಷಗಳನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುತ್ತಿದೆ ಮತ್ತು ಪ್ರಜಾತಾಂತ್ರಿಕ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು.ಈ ನಡುವೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸಂಸದರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

ಉತ್ತರಾಖಾಂಡ್‍ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಚರ್ಚೆ ಇಲ್ಲ ಎಂದು ಅರುಣ್ ಜೇಟ್ಲಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಕಾಂಗ್ರೆಸ್ ಸದಸ್ಯರು ಸದನದ ಬಾವಿಯೊಳಗೆ ಇಳಿದು ಪ್ರತಿಭಟನೆ ನಡೆಸಿದರು.

ಉತ್ತರಾಖಾಂಡ್ ನಲ್ಲಿ ರಾಷ್ರಪತಿ ಆಳ್ವಿಕೆ ಹೇರಿರುವದನ್ನು ಸಮರ್ಥಿಸಿಕೊಂಡ ಜೇಟ್ಲಿ, ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರ ಮುರಿದು ಬಿದ್ದಿದೆ ಎಂದರು.

ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಮತ್ತು ಪ್ರಮೋದ್ ತಿವಾರಿ ನೋಟಿಸ್ ನೀಡಿ ಚರ್ಚೆ ನಡೆಸುವಂತೆ ಮನವಿ ಮಾಡಿದರು. ಎಸ್ಪಿ ಸಂಸದ ನರೇಶ್ ಅಗರ್ವಾಲ್ ಸಹ ಚರ್ಚೆಗೆ ಒತ್ತಾಯಿಸಿ ನೋಟಿಸ್ ನೀಡಿದರು. ಬಿಎಸ್‍ಪಿ ಅಧ್ಯಕ್ಷೆ ಮಾಯಾವತಿ ನೋಟಿಸ್‍ಗೆ ಬೆಂಬಲ ಸೂಚಿಸಿದರು.

ಇತ್ತ ಲೋಕಸಭೆಯಲ್ಲೂ ಕಾಂಗ್ರೆಸ್ ಸಂಸದರು ಸಭಾಪತಿಗಳ ಪೀಠದ ಮುಂಭಾಗದಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೊಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸರ್ಕಾರದ ತೀರ್ಮನವನ್ನು ಸಮರ್ಥಿಸಿಕೊಂಡ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯನಾಯ್ಡ ಉತ್ತರಾಖಾಂಡ್ ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿತ್ತು. ಹಾಗಾಗಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವೆಕ ಏರಿಕೆ ಎಂದು ಸದನಕ್ಕೆ ತಿಳಿಸಿದರು.

ಈ ಹಂತದಲ್ಲಿ ಗದ್ದಲ ಹೆಚ್ಚಾದ ಕಾರಣ ಸಭಾಪತಿಗಳು ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು. ಕಲಾಪ ಪ್ರಾರಂಭವಾದ ನಂತರ ಸಹ ಗದ್ದಲು ಮುಂದುವರೆದ ಕಾರಣ ಮತ್ತೊಮ್ಮೆ ಕಲಾಪವನ್ನು 12.35ರವರೆಗೆ ಮುಂದೂಡಿದರು. ಮತ್ತೊಮ್ಮೆ ಗಲಭೆ ಮುಂದುವರೆದಿದ್ದು, ಕಲಾಪವನ್ನು ಮುಂದೂಡಲಾಯಿತು.

ತಿಂಗಳ ವಿರಾಮದ ಬಳಿಕ ಆರಂಭವಾದ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನದ ಕಲಾಪ ಸದಸ್ಯರ ಗದ್ದಲಕ್ಕೆ ಬಲಿಯಾಗಿತ್ತು.