ಬಿಜೆಪಿ 2ನೇ ಪಟ್ಟಿ ಬಿಡುಗಡೆ; ಇನ್ನೂ ನಿರ್ಧಾರವಾಗದ 70 ಕ್ಷೇತ್ರಗಳ ಟಿಕೆಟ್
ಸುದ್ದಿ ಸಾರ

ಬಿಜೆಪಿ 2ನೇ ಪಟ್ಟಿ ಬಿಡುಗಡೆ; ಇನ್ನೂ ನಿರ್ಧಾರವಾಗದ 70 ಕ್ಷೇತ್ರಗಳ ಟಿಕೆಟ್

ಬಿಜೆಪಿ ಮೊದಲ ಪಟ್ಟಿಯಲ್ಲಿ ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಒಟ್ಟು 72 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿತ್ತು. ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರಿದೆ.

ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಳೆದ ಭಾನುವಾರ ತಡರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಸೋಮವಾರ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಒಟ್ಟು 72 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿತ್ತು. ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರಿದೆ.

ಸೊರಬದಲ್ಲಿ ಕುಮಾರ್‌ ಬಂಗಾರಪ್ಪ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಘೋಷಣೆಯಾಗಿದೆ. ಕುಮಾರ್ ಬಂಗಾರಪ್ಪ ಸೋದರ ಮಧು ಬಂಗಾರಪ್ಪ ಇದೇ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿದ್ದಾರೆ. ಈ ಇಬ್ಬರೂ ಸಹೋದರರ ಪೈಕಿ ಈ ಬಾರಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

ಹೊನ್ನಾಳಿ ಕ್ಷೇತ್ರದಿಂದ ಎಂ.ಪಿ. ರೇಣುಕಾಚಾರ್ಯಗೆ ಬಿಜೆಪಿ ಟಿಕೆಟ್‌ ನೀಡಿದೆ. ಸಾಗರ ಕ್ಷೇತ್ರಕ್ಕೆ ಹರತಾಳು ಹಾಲಪ್ಪ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ.

ಶಾಂತಿನಗರ ಕ್ಷೇತ್ರದಲ್ಲಿ ವಾಸುದೇವ ಮೂರ್ತಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಶಿವಾಜಿನಗರ ಕ್ಷೇತ್ರದಿಂದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ನೆ.ಲ. ನರೇಂದ್ರ ಬಾಬು ಅವರಿಗೆ ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರಕ್ಕೆ ಟಿಕೆಟ್‌ ನೀಡಿದೆ. ಬಳ್ಳಾರಿ ನಗರ ಕ್ಷೇತ್ರದಿಂದ ಜಿ. ಸೋಮಶೇಖರ ರೆಡ್ಡಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ.

ಕೊರಟಗೆರೆ ಮೀಸಲು ಕ್ಷೇತ್ರಕ್ಕೆ ವೈ.ಹುಚ್ಚಯ್ಯ, ತಿಪಟೂರು ಕ್ಷೇತ್ರಕ್ಕೆ ಬಿ.ಸಿ. ನಾಗೇಶ್‌, ತುರುವೇಕೆರೆ ಕ್ಷೇತ್ರಕ್ಕೆ ಮಸಾಲೆ ಜಯರಾಮ್‌ ಅವರಿಗೆ ಟಿಕೆಟ್ ನೀಡಲಾಗಿದೆ.

ಹಿಂದೆ ಕೆಜೆಪಿಯಲ್ಲಿದ್ದ ಜ್ಯೋತಿ ಗಣೇಶ್‌ಗೆ ತುಮಕೂರು ನಗರ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಾಗಿದೆ. ಇದರಿಂದ ಸೊಗಡು ಶಿವಣ್ಣ ಅವರಿಗೆ ಟಿಕೆಟ್‌ ಕೈತಪ್ಪಿದೆ.

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ:

ಬಿಜೆಪಿ 2ನೇ ಪಟ್ಟಿ ಬಿಡುಗಡೆ; ಇನ್ನೂ ನಿರ್ಧಾರವಾಗದ 70 ಕ್ಷೇತ್ರಗಳ ಟಿಕೆಟ್
ಬಿಜೆಪಿ 2ನೇ ಪಟ್ಟಿ ಬಿಡುಗಡೆ; ಇನ್ನೂ ನಿರ್ಧಾರವಾಗದ 70 ಕ್ಷೇತ್ರಗಳ ಟಿಕೆಟ್
ಬಿಜೆಪಿ 2ನೇ ಪಟ್ಟಿ ಬಿಡುಗಡೆ; ಇನ್ನೂ ನಿರ್ಧಾರವಾಗದ 70 ಕ್ಷೇತ್ರಗಳ ಟಿಕೆಟ್