samachara
www.samachara.com
ಎಚ್‌. ವಿಶ್ವನಾಥ್‌ಗೆ ಜೆಡಿಎಸ್‌ ರಾಜ್ಯ ಸಾರಥ್ಯ; ಪಕ್ಷದ ಪ್ರಮುಖರ ಸಭೆಯಲ್ಲಿ ನಿರ್ಣಯ
ಸುದ್ದಿ ಸಾರ

ಎಚ್‌. ವಿಶ್ವನಾಥ್‌ಗೆ ಜೆಡಿಎಸ್‌ ರಾಜ್ಯ ಸಾರಥ್ಯ; ಪಕ್ಷದ ಪ್ರಮುಖರ ಸಭೆಯಲ್ಲಿ ನಿರ್ಣಯ

ಭಾನುವಾರ ನಡೆದ ಜೆಡಿಎಸ್‌ ಪ್ರಮುಖರ ಸಭೆಯಲ್ಲಿ ಶಾಸಕ ಎಚ್‌. ವಿಶ್ವನಾಥ್‌ ಅವರನ್ನು ಜೆಡಿಎಸ್‌ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಹುಣಸೂರು ಕ್ಷೇತ್ರದ ಶಾಸಕ ಎಚ್. ವಿಶ್ವನಾಥ್ ಅವರನ್ನು ಜೆಡಿಎಸ್‌ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

‍ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಈವರೆಗೆ ರಾಜ್ಯಾಧ್ಯಕ್ಷರಾಗಿದ್ದ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆಗೇರಿದ ನಂತರ ಪಕ್ಷದ ಸಂಘಟನೆಗೆ ಒತ್ತು ನೀಡಲು ಸಮಯ ಸಿಗುತ್ತಿರಲಿಲ್ಲ. ಈ ಕಾರಣ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಹರೊಬ್ಬರ ನೇಮಕದ ಬಗ್ಗೆ ದೇವೇಗೌಡ ಒಲವು ತೋರಿದ್ದರು.

ಕುರುಬ ಸಮುದಾಯದ ನಾಯಕರಾಗಿರುವ ವಿಶ್ವನಾಥ್‌ ಹಲವು ದಶಕಗಳ ಕಾಲ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ಗೆ ಕರೆತರುವಲ್ಲಿ ವಿಶ್ವನಾಥ್‌ ಪಾತ್ರ ಪ್ರಮುಖವಾಗಿತ್ತು. ಸಿದ್ದರಾಮಯ್ಯ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ವಿಶ್ವನಾಥ್‌ ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಿದ್ದರು.