samachara
www.samachara.com
ಬೋಫೋರ್ಸ್‌ ಡೀಲ್: ಸಿಬಿಐ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌
ಸುದ್ದಿ ಸಾರ

ಬೋಫೋರ್ಸ್‌ ಡೀಲ್: ಸಿಬಿಐ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

ದೆಹಲಿ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಲು ವಿಳಂಬ ಮಾಡಿರುವುದಕ್ಕೆ ಯಾವುದೇ ಸೂಕ್ತ ಕಾರಣಗಳಿಲ್ಲ ಎಂದಿರುವ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯಿ ನೇತೃತ್ವದ ನ್ಯಾಯಪೀಠ ಮೇಲ್ಮನವಿಯನ್ನು ತಳ್ಳಿ ಹಾಕಿದೆ.

ಬೋಫೋರ್ಸ್‌ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ದೆಹಲಿ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಲು ವಿಳಂಬ ಮಾಡಿರುವುದಕ್ಕೆ ಯಾವುದೇ ಸೂಕ್ತ ಕಾರಣಗಳಿಲ್ಲ ಎಂದಿರುವ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯಿ ನೇತೃತ್ವದ ನ್ಯಾಯಪೀಠ ಮೇಲ್ಮನವಿಯನ್ನು ತಳ್ಳಿ ಹಾಕಿದೆ.

ಆದರೆ, ದೆಹಲಿ ಹೈಕೋರ್ಟ್‌ನ ಇದೇ ತೀರ್ಪನ್ನು ಪ್ರಶ್ನಿಸಿ ವಕೀಲ ಅಜಯ್‌ ಅಗರ್‌ವಾಲ್‌ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇದ್ದು, ಆ ಅರ್ಜಿಯ ಜತೆಗೆ ಸಿಬಿಐ ವಿಳಂಬಕ್ಕೆ ಸೂಕ್ತ ಕಾರಣ ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸಬಹುದು ಎಂದು ನ್ಯಾಯಪೀಠ ಹೇಳಿದೆ.

ಭಾರತೀಯ ಸೇನೆಗೆ ಶಸ್ತ್ರಾಸ್ತ್ರ ಪೂರೈಸುವ ಸಂಬಂಧ ಭಾರತ ಮತ್ತು ಸ್ವೀಡಿಶ್‌ ಶಸ್ತ್ರಾಸ್ತ್ರ ತಯಾರಿಕಾ ಕಂಪೆನಿ ಎಬಿ ಬೋಪೋರ್ಸ್‌ ನಡುವೆ 1986ರಲ್ಲಿ 1,437 ಕೋಟಿ ರೂಪಾಯಿಯ ಒಪ್ಪಂದ ಏರ್ಪಟ್ಟಿತ್ತು. ಈ ಒಪ್ಪಂದದಲ್ಲಿ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಸೇರಿದಂತೆ ಭಾರತದ ಪ್ರಭಾವಿ ರಾಜಕಾರಣಿಗಳು 64 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಳಿಬಂದಿತ್ತು.

ದೆಹಲಿ ಹೈಕೋರ್ಟ್‌ 2005ರಲ್ಲಿ ಹಿಂದೂಜಾ ಸಹೋದರರು ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ದೆಹಲಿ ಹೈಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ಸಿಬಿಐ ಈ ವರ್ಷದ ಫೆಬ್ರುವರಿಯಲ್ಲಿ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಸಲ್ಲಿಸಲು ಸುಮಾರು 13 ವರ್ಷ ವಿಳಂಬ ಮಾಡಿದ್ದಕ್ಕೆ ಸಿಬಿಐ ಸೂಕ್ತ ಕಾರಣ ನೀಡದ ಕಾರಣ ಅರ್ಜಿ ವಜಾಗೊಂಡಿದೆ.