ಸಿಖ್‌ ದಂಗೆ ಪ್ರಕರಣ: ದೆಹಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ  ಮೊರೆ ಹೋದ ಸಜ್ಜನ್‌ ಕುಮಾರ್
ಸುದ್ದಿ ಸಾರ

ಸಿಖ್‌ ದಂಗೆ ಪ್ರಕರಣ: ದೆಹಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಸಜ್ಜನ್‌ ಕುಮಾರ್

ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್‌ ಕುಮಾರ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸಜ್ಜನ್‌ ಕುಮಾರ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಿಖ್‌ ವಿರೋಧಿ ದಂಗೆಯಲ್ಲಿ ಸಜ್ಜನ್‌ ಕುಮಾರ್‌ ತಪ್ಪಿತಸ್ಥ ಎಂದಿದ್ದ ದೆಹಲಿ ಹೈಕೋರ್ಟ್ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಲ್ಲದೆ ಡಿಸೆಂಬರ್‌ 31ರೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಕಾಲಮಿತಿ ವಿಧಿಸಲಾಗಿತ್ತು.

Also read: 1984ರ ಸಿಖ್‌ ವಿರೋಧಿ ದಂಗೆ: ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

ನ್ಯಾಯಾಲಯಕ್ಕೆ ಶರಣಾಗುವ ಮಿತಿಯನ್ನು ಒಂದು ತಿಂಗಳು ವಿಸ್ತರಿಸುವಂತೆ ಸಜ್ಜನ್‌ ಕುಮಾರ್‌ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದರು. ಆದರೆ, ದೆಹಲಿ ಹೈಕೋರ್ಟ್‌ ಈ ಮನವಿಯನ್ನು ತಿರಸ್ಕರಿಸಿತ್ತು.

ದೆಹಲಿ ಹೈಕೋರ್ಟ್‌ ಮನವಿಯನ್ನು ತಿರಸ್ಕರಿಸಿದ ಬೆನ್ನಲ್ಲೇ ಸಜ್ಜನ್‌ ಕುಮಾರ್ ಪರ ವಕೀಲ ಎಚ್‌.ಎಸ್‌. ಫೂಲ್ಕ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

1984ರಲ್ಲಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ಸಿಖ್ಖರನ್ನು ಗುರಿಯಾಗಿಸಿಕೊಂಡು ನಡೆದ ಗಲಭೆಯಲ್ಲಿ ಸುಮಾರು 3000 ಮಂದಿ ಸಾವನ್ನಪ್ಪಿದ್ದರು. ಈ ಗಲಭೆ ಪ್ರಕರಣದ ಪ್ರಮುಖ ಆರೋಪಿ ಸಜ್ಜನ್‌ ಕುಮಾರ್‌ಗೆ ದೆಹಲಿ ಹೈಕೋರ್ಟ್‌ ಕಳೆದ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿತ್ತು.