ಜ.10ರಿಂದ ಅಯೋಧ್ಯೆ ಭೂ ವಿವಾದ ವಿಚಾರಣೆ: 60 ಸೆಕೆಂಡ್‌ ಕಲಾಪದಲ್ಲಿ ಸುಪ್ರೀಂಕೋರ್ಟ್‌ ಹೇಳಿದ್ದಿಷ್ಟೆ
ಸುದ್ದಿ ಸಾರ

ಜ.10ರಿಂದ ಅಯೋಧ್ಯೆ ಭೂ ವಿವಾದ ವಿಚಾರಣೆ: 60 ಸೆಕೆಂಡ್‌ ಕಲಾಪದಲ್ಲಿ ಸುಪ್ರೀಂಕೋರ್ಟ್‌ ಹೇಳಿದ್ದಿಷ್ಟೆ

ಒಂದು ನಿಮಿಷದೊಳಗೆ ಪ್ರಕರಣದ ಇಂದಿನ ವಿಚಾರಣೆ ಪೂರ್ಣಗೊಳಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯಿ ನೇತೃತ್ವದ ನ್ಯಾಯಪೀಠ ದಿನಾಂಕ ಘೋಷಿಸಿ ವಿಚಾರಣೆಯನ್ನು ಮುಂದೂಡಿದೆ.

ಉತ್ತರ ಪ್ರದೇಶದ ಅಯೋಧ್ಯೆಯ ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಂದಿನ ಗುರುವಾರದಿಂದ (ಜನವರಿ 10) ಆರಂಭಿಸಲಿದೆ. ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಈ ಭೂ ವಿವಾದದ ಪ್ರಕರಣ ವಿಚಾರಣೆಗೆ ಬರಲಿದೆ.

ಒಂದು ನಿಮಿಷದೊಳಗೆ ಪ್ರಕರಣದ ಇಂದಿನ ವಿಚಾರಣೆ ಪೂರ್ಣಗೊಳಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯಿ ನೇತೃತ್ವದ ನ್ಯಾಯಪೀಠ ದಿನಾಂಕ ಘೋಷಿಸಿ ವಿಚಾರಣೆಯನ್ನು ಮುಂದೂಡಿದೆ.

“ಅಯೋಧ್ಯೆಯ ರಾಮ ಜನ್ಮಭೂಮಿಯ ಜಾಘದಲ್ಲಿ 16ನೇ ಶತಮಾನದಲ್ಲಿ ಬಾಬ್ರಿ ಮಸೀದಿಯನ್ನು ನಿರ್ಮಿಸಲಾಗಿದೆ” ಎಂದು ವಾದಿಸಿದ್ದ ಹಿಂದುತ್ವ ಸಂಘಟನೆಗಳು 1992ರ ಡಿಸೆಂಬರ್‌ 6ರಂದು ಬಾಬ್ರಿ ಮಸೀದಿಯನ್ನು ಕೆಡವಿದ್ದವು.

2.7 ಎಕರೆ ಜಾಗದ ವಿವಾದಿತ ಭೂಮಿಯಲ್ಲಿ ಬಾಬ್ರಿ ಮಸೀದಿಯನ್ನು ನೆಲಸಮಗೊಳಿಸಿ ಆ ಜಾಗದಲ್ಲಿ ರಾಮ ಮಂದಿರ ನಿರ್ಮಿಸಬೇಕು ಎಂಬುದು ಹಿಂದುತ್ವ ಸಂಘಟನೆಗಳ ವಾದ. ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದೂ ಹಿಂದುತ್ವ ಸಂಘಟನೆಗಳು ಒತ್ತಾಯಿಸುತ್ತಿವೆ. ಆದರೆ, ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿರುವುದರಿಂದ ಸದ್ಯಕ್ಕೆ ಸುಗ್ರೀವಾಜ್ಞೆ ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.