samachara
www.samachara.com
ಬಿಹಾರದಲ್ಲಿ ಹಳಿತಪ್ಪಿದ ಸೀಮಾಂಚಲ್ ಎಕ್ಸ್‌ಪ್ರೆಸ್; ಕನಿಷ್ಠ 7 ಸಾವು, 24 ಮಂದಿಗೆ ಗಾಯ
ಸುದ್ದಿ ಸಾರ

ಬಿಹಾರದಲ್ಲಿ ಹಳಿತಪ್ಪಿದ ಸೀಮಾಂಚಲ್ ಎಕ್ಸ್‌ಪ್ರೆಸ್; ಕನಿಷ್ಠ 7 ಸಾವು, 24 ಮಂದಿಗೆ ಗಾಯ

ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಸೀಮಾಂಚಲ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ರೈಲು ವೇಗವಾಗಿ ಸಾಗುತ್ತಿದ್ದ ವೇಳೆ ಹಳಿ ತಪ್ಪಿದೆ ಎನ್ನಲಾಗಿದೆ.

Team Samachara

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಸೀಮಾಂಚಲ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ್ದು, ಹನ್ನೊಂದು ಬೋಗಿಗಳು ಉರುಳಿ ಕನಿಷ್ಠ 7 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕನಿಷ್ಠ 24 ಮಂದಿ ಗಾಯಗೊಂಡಿದ್ದಾರೆ.

ಮುಂಜಾನೆ 4 ಗಂಟೆ ಸುಮಾರಿಗೆ ರೈಲು ಹಳಿ ತಪ್ಪಿದೆ. ರೈಲು ವೇಗವಾಗಿ ಸಾಗುತ್ತಿದ್ದ ವೇಳೆ ಹಳಿ ತಪ್ಪಿದೆ ಎನ್ನಲಾಗಿದೆ. ಒಂದು ಸಾಮಾನ್ಯ ಬೋಗಿ, ಎಸಿ ಬೋಗಿ ಬಿ3, ಎಸ್8, ಎಸ್9, ಎಸ್10 ಸ್ಲೀಪರ್‌ ಕೋಚ್‌ ಮತ್ತು ಉಳಿದ 6 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಸಚಿವ ಪಿಯೂಷ್ ಗೋಯಲ್ ಸಹಾಯವಾಣಿ ಸಂಖ್ಯೆಗಳನ್ನು ಟ್ವೀಟ್‌ ಮಾಡಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ, ಗಂಭೀರವಾಗಿ ಗಾಯಗೊಂಡಿರುವವರಿಗೆ 1 ಲಕ್ಷ ಹಾಗೂ ಇತರೆ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಎಲ್ಲಾ ಚಿಕಿತ್ಸಾ ವೆಚ್ಚವನ್ನು ರೈಲ್ವೆ ಇಲಾಖೆಯೇ ಭರಿಸಲಿದೆ ಎಂದು ಪಿಯೂಷ್‌ ಗೋಯಲ್‌ ಹೇಳಿದ್ದಾರೆ.