samachara
www.samachara.com
ಉತ್ತರದ ನಕಲಿ ಮದ್ಯ ದುರಂತ; 72ಕ್ಕೆ ಏರಿದ ಸಾವಿನ ಸಂಖ್ಯೆ
ಸುದ್ದಿ ಸಾರ

ಉತ್ತರದ ನಕಲಿ ಮದ್ಯ ದುರಂತ; 72ಕ್ಕೆ ಏರಿದ ಸಾವಿನ ಸಂಖ್ಯೆ

ನಕಲಿ ಮದ್ಯ ದುರಂತದಿಂದ ಪಶ್ಚಿಮ ಉತ್ತರ ಪ್ರದೇಶದ ಶಹರನ್‌ಪುರದಲ್ಲಿ 36 ಮಂದಿ, ಕುಷಿನಗರದಲ್ಲಿ 8 ಮಂದಿ ಹಾಗೂ ಉತ್ತರಾಖಂಡದಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ.

Team Samachara

ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 72ಕ್ಕೆ ಏರಿದೆ. ಕಳೆದ ಮೂರು ದಿನಗಳಿಂದ ಈ ಎರಡೂ ರಾಜ್ಯಗಳಲ್ಲಿ ನಕಲಿ ಮದ್ಯಕ್ಕೆ ಬಲಿಯಾದವರ ಸಂಖ್ಯೆ ಏರುತ್ತಲೇ ಇದೆ.

ಪಶ್ಚಿಮ ಉತ್ತರ ಪ್ರದೇಶದ ಶಹರನ್‌ಪುರದಲ್ಲಿ 36 ಮಂದಿ, ಕುಷಿನಗರದಲ್ಲಿ 8 ಮಂದಿ ಹಾಗೂ ಉತ್ತರಾಖಂಡದಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ನಕಲಿ ಮದ್ಯ ಕುಡಿದಿರುವ ಸುಮಾರು 50 ಮಂದಿಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಹರನ್‌ಪುರದಲ್ಲಿ ಶುಕ್ರವಾರ ಅಸ್ವಸ್ಥರಾದ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥರು ನಕಲಿ ಮದ್ಯ ಕುಡಿದಿದ್ದಾರೆ ಎಂದು ಗೊತ್ತಾದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ಸಂಬಂಧ ಕುಷಿನಗರ ಜಿಲ್ಲೆಯಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ.

ಘಟನೆಯ ಬೆನ್ನಲ್ಲೇ 13 ಮಂದಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಲಾಗಿದೆ. ಉತ್ತರಪ್ರದೇಶದಲ್ಲಿ ನಡೆದ ಮದ್ಯ ದುರಂತದ ಬಗ್ಗೆ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶ ನೀಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.