ಭೈರಗೊಂಡಗೆ ಸೇರಿದ ಬ್ಯಾಂಕ್ ಖಾತೆಗಳ ಮುಟ್ಟುಗೋಲಿಗೆ ಸಿಐಡಿ ಮನವಿ ಪತ್ರ
ರಾಜ್ಯ

ಭೈರಗೊಂಡಗೆ ಸೇರಿದ ಬ್ಯಾಂಕ್ ಖಾತೆಗಳ ಮುಟ್ಟುಗೋಲಿಗೆ ಸಿಐಡಿ ಮನವಿ ಪತ್ರ

ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಸಾಹುಕಾರ ಭೈರಗೊಂಡಗೆ ಸೇರಿದ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಿಐಡಿ ಅಧಿಕಾರಿಗಳು ಬ್ಯಾಂಕ್‌ಗಳಿಗೆ ಪತ್ರ ಬರೆದಿದ್ದಾರೆ.

ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಸದ್ಯ ತಲೆಮರೆಸಿಕೊಂಡಿರುವ ಮಹಾದೇವ ಸಾಹುಕಾರ ಭೈರಗೊಂಡಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಿಐಡಿ ಅಧಿಕಾರಿಗಳು 30ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮಹಾದೇವ ಸಾಹುಕಾರ ಭೈರಗೊಂಡ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಕೆಲ ದಿನಗಳಿಂದ ವಿಜಯಪುರ ಜಿಲ್ಲೆಯಿಂದ ಪರಾರಿಯಾಗಿದ್ದಾನೆ. ಆರೋಪಿಯ ಖಾತೆಗಳ ಚಟುವಟಿಕೆ ನಿಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಆತನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಚಡಚಣ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಇನ್ನೂ ಮೂವರು ಆರೋಪಿಗಳಾದ ಸಿದ್ದಗೊಂಡಪ್ಪ ಮಡವೆ, ಚಾಂದಹುಸೇನಿ ಚಡಚಣ ಮತ್ತು ಭೀಮ ಪೂಜಾರಿ ಅವರು ನ್ಯಾಯಾಲಯಕ್ಕೆ ಶರಣಾಗಿದ್ದು, ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಿಐಡಿ ಅಧಿಕಾರಿಗಳ ತಂಡ, ನಗರದ ಪ್ರವಾಸಿ ಮಂದಿರದಲ್ಲಿ ಬೀಡು ಬಿಟ್ಟಿದ್ದು, ಚಡಚಣ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಚಡಚಣ ಸಿಪಿಐ ಮಲ್ಲಿಕಾರ್ಜುನ ಅಸೂಡೆ ಅವರ ಮೊಬೈಲ್ ಕರೆ ಮಾಹಿತಿ ಕಲೆ ಹಾಕುತ್ತಿದೆ ಎಂದು ತಿಳಿದು ಬಂದಿದೆ.