samachara
www.samachara.com
ದಿನೇಶ್‌ ಗುಂಡೂರಾವ್ - ಈಶ್ವರ ಖಂಡ್ರೆ
ರಾಜ್ಯ

ಕೆಪಿಸಿಸಿಗೆ ದಿನೇಶ್‌ ಗುಂಡೂರಾವ್‌ ಸಾರಥ್ಯ; ಈಶ್ವರ ಖಂಡ್ರೆ ಕಾರ್ಯಾಧ್ಯಕ್ಷ

ಈ ನೇಮಕಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್‌ ಗೆಹ್ಲೋಟ್ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್‌ ಗುಂಡೂರಾವ್‌ ನೇಮಕಗೊಂಡಿದ್ದಾರೆ. ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಇಬ್ಬರ ನೇಮಕಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್‌ ಗೆಹ್ಲೋಟ್ ತಿಳಿಸಿದ್ದಾರೆ.

ಸದ್ಯ ಉಪ ಮುಖ್ಯಮಂತ್ರಿಯಾಗಿರುವ ಡಾ. ಜಿ. ಪರಮೇಶ್ವರ್‌ ಎಂಟು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಲ್ಲಿಯವರೆಗೂ ದಿನೇಶ್‌ ಗುಂಡೂರಾವ್‌ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು.

ಎಐಸಿಸಿ ಪ್ರಕಟಣೆ
ಎಐಸಿಸಿ ಪ್ರಕಟಣೆ